alex Certify ಆಪರೇಷನ್ ಥಿಯೇಟರ್ ನಲ್ಲೇ ನಕಲಿ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪರೇಷನ್ ಥಿಯೇಟರ್ ನಲ್ಲೇ ನಕಲಿ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ

ಇಸ್ಲಾಮಾಬಾದ್: ಪಾಕಿಸ್ತಾನದ ಡೇರಾ ಘಾಜಿ ಖಾನ್‌ನಲ್ಲಿರುವ ಖಾಸಗಿ ಚಿಕಿತ್ಸಾಲಯವೊಂದರಲ್ಲಿ ನಕಲಿ ವೈದ್ಯನೊಬ್ಬ ಮಹಿಳಾ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಮಹಿಳೆ ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಬೋಧನಾ ಆಸ್ಪತ್ರೆಯ ಬಳಿ ಬಾಲ್ಕ್ ಸರ್ವಾರ್ ಸಿಟಿಯಲ್ಲಿರುವ ಕ್ಲಿನಿಕ್ ಗೆ ಹೋಗಿದ್ದ ವೇಳೆ ಘಟನೆ ನಡೆದಿದೆ.

ಹೊಟ್ಟೆ ನೋವಿನ ಕಾರಣ ಮಹಿಳೆಯನ್ನು ಕುಟುಂಬ ಸದಸ್ಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಮೊಹಮ್ಮದ್ ಇಮ್ರಾನ್ ಅಲಿಯಾಸ್ ಇಶ್ತಿಯಾಕ್ ಎಂಬ ವ್ಯಕ್ತಿ ಆಪರೇಷನ್ ಥಿಯೇಟರ್ ಗೆ ಕರೆದುಕೊಂಡು ಹೋಗಿದ್ದಾನೆ. ಮಹಿಳೆಗೆ ತಲೆತಿರುಗಿದಂತಾಗಿದ್ದು, ಈ ವೇಳೆ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಗೆ ಪ್ರಜ್ಞೆ ಮರಳಿದಂತಾಗಿ ಕಿರುಚಾಟ ನಡೆಸಿದ್ದಾಳೆ. ಮಹಿಳೆಯ ಪತಿ ಮತ್ತು ಆಕೆಯ ಕಡೆಯವರು ನೆರವಿಗೆ ಧಾವಿಸಿದ್ದಾರೆ.

ಮಹಿಳೆ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಮಹಿಳೆಯ ಪತಿ ನೀಡಿದ ಹೇಳಿಕೆಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿವಿಲ್ ಲೈನ್ ಪೊಲೀಸ್ ಠಾಣೆ ಎಸ್‌ಹೆಚ್‌ಒ ಕರಮ್ ಇಲಾಹಿ ತಿಳಿಸಿದ್ದಾರೆ.

ಮೊಹಮ್ಮದ್ ಇಮ್ರಾನ್ ಹೆಸರಿನ ಯಾವುದೇ ವೈದ್ಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿಲ್ಲ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಆತ ನಕಲಿ ವೈದ್ಯನಾಗಿದ್ದಾನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...