ಕರಾಚಿ ಪೊಲೀಸ್ ಮುಖ್ಯಸ್ಥರ ಕಚೇರಿಯಲ್ಲಿ ಗನ್ ಹಿಡಿದು ತಿರುಗಾಡಿದ ಉಗ್ರರ ವಿಡಿಯೋ ವೈರಲ್…!

Pakistan: Hours after attack, video of terrorists roaming around Police chief's office in Karachi emerges

ಪಾಕಿಸ್ತಾನದ ಕರಾಚಿಯಲ್ಲಿ ಅಲ್ಲಿನ ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ದಾಳಿ ನಡೆಸಿದ್ದ ಉಗ್ರರ ತಂಡ ಕಛೇರಿ ವಶಪಡಿಸಿಕೊಳ್ಳಲು ಪ್ರಯತ್ನ ನಡೆಸಿತ್ತು.

ಆದರೆ ನಂತರ ನಡೆದ ಕಾರ್ಯಾಚರಣೆಯಲ್ಲಿ ಎಲ್ಲ ಉಗ್ರರನ್ನು ಹೊಡೆದುರುಳಿಸಿದ್ದು, ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ಇಬ್ಬರು ನಾಗರಿಕರು ಸಹ ಸಾವನ್ನಪ್ಪಿದ್ದರು.

ದಾಳಿ ನಡೆಸಿದ ಉಗ್ರರ ಪೈಕಿ ಓರ್ವ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನೇ ಸ್ಪೋಟಿಸಿಕೊಂಡಿದ್ದ ವಿಡಿಯೋ ಒಂದನ್ನು ಪಾಕಿಸ್ತಾನದ ಪತ್ರಕರ್ತರೊಬ್ಬರು ಶೇರ್ ಮಾಡಿದ್ದು, ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಈಗ ಹೊರಬಿದ್ದಿರುವ ಹೊಸ ವಿಡಿಯೋದಲ್ಲಿ ಮೂವರು ಉಗ್ರರು ಗನ್ ಹಿಡಿದು ಪೊಲೀಸ್ ಮುಖ್ಯಸ್ಥರ ಕಚೇರಿಯ ಕಾರಿಡಾರ್ ನಲ್ಲಿ ಅಡ್ಡಾಡುತ್ತಿರುವುದನ್ನು ಕಾಣಬಹುದಾಗಿದೆ. ನಂತರ ನಡೆದ ಕಾರ್ಯಾಚರಣೆಯಲ್ಲಿ ಇವರುಗಳನ್ನು ಹತ್ಯೆ ಮಾಡಲಾಗಿದೆ.

https://youtu.be/DseDh5HzENw

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read