ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ, ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಅತ್ಯಂತ ಕೀಳು ಮಟ್ಟದ ಹೇಳಿಕೆ ನೀಡಿದ ಬಳಿಕ, ಆತನನ್ನು ಬೆಂಬಲಿಸುವ ಭರದಲ್ಲಿ ಪಾಕಿಸ್ತಾನದ ಮತ್ತೊಬ್ಬ ನಾಯಕಿ ಭಾರತದ ವಿರುದ್ಧ ವಿಷ ಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ನಾಯಕಿ ಶಾಜಿಯಾ ಮರ್ರಿ, ಭಾರತದ ವಿರುದ್ಧ ಅಣ್ವಸ್ತ್ರ ಪ್ರಯೋಗಿಸುವ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಕಿಡಿ ಕಾರಿದ್ದಾರೆ.
ಭಾರತ, ಪಾಕಿಸ್ತಾನವನ್ನು ಪದೇ ಪದೇ ಕೆಣಕುತ್ತಿದೆ. ನಮ್ಮ ಬಳಿ ಅಣ್ವಸ್ತ್ರ ಇದೆ ಎಂಬುದನ್ನು ಅವರು ಮರೆಯಬಾರದು. ಅದನ್ನು ನಾವು ಮೌನ ವಹಿಸಲು ಇಟ್ಟುಕೊಂಡಿಲ್ಲ ಎಂದಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಬಿಲಾವಲ್ ಭುಟ್ಟೋ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.
ಬಿಲಾವಲ್ ಭುಟ್ಟೋ ಹೇಳಿಕೆಗೆ ಭಾರತದಲ್ಲಿ ಈಗಾಗಲೇ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದ್ದು, ಜೊತೆಗೆ ಅಧಿಕೃತವಾಗಿಯೂ ಇದನ್ನು ದಾಖಲಿಸಲಾಗಿದೆ. ಇದೀಗ ಪಾಕಿಸ್ತಾನದ ಮತ್ತೊಬ್ಬ ನಾಯಕಿ ಇಂತಹ ಹೇಳಿಕೆ ನೀಡಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.