
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಸಂಭವಿಸಲಿದೆ ಎಂದು ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಖ್ಯಾತ ಜ್ಯೋತಿಷಿ ರುದ್ರ ಕರಣ್ ಪ್ರತಾಪ್ ಈಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. 2025ರ ಏಪ್ರಿಲ್ ಹಾಗೂ ಸೆಪ್ಟೆಂಬರ್ ನಡುವಿನ ಅವಧಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಭಾರತದ ವಶವಾಗಲಿದೆ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಅವರು ಪೋಸ್ಟ್ ಹಾಕಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳ ಮಹಾದಶ ನಡೆಯುತ್ತಿದ್ದು, 2024ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಮಹಾ ದಶದ ಹಿನ್ನೆಲೆಯಲ್ಲಿ ಭೂಮಿಗೆ ಸಂಬಂಧಪಟ್ಟ ವಿಷಯ ಪರಿಹಾರವಾಗಲಿದ್ದು, ಪಾಕ್ ಆಕ್ರಮಿತ ಕಾಶ್ಮೀರ, ಭಾರತಕ್ಕೆ ಸೇರ್ಪಡೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ 60,000 ಫಾಲೋವರ್ಸ್ ಗಳನ್ನು ರುದ್ರ ಕರಣ್ ಪ್ರತಾಪ್ ಹೊಂದಿದ್ದು, ಆಸಕ್ತಿಕರ ಸಂಗತಿ ಎಂದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ರುದ್ರ ಕರಣ್ ಪ್ರತಾಪ್ ಅವರ ಎಕ್ಸ್ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ. ಈ ಹಿಂದೆ ರುದ್ರ ಕರಣ್ ಪ್ರತಾಪ್ ನುಡಿದಿದ್ದ ಹಲವು ಭವಿಷ್ಯಗಳು ನಿಜವಾಗಿದ್ದು ಇದೀಗ ಈಗಿನ ಭವಿಷ್ಯವೂ ಕುತೂಹಲಕಾರಿಯಾಗಿದೆ.