
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಪ್ರಯಾಣಿಕರ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೆಳ ಕುರ್ರಂ ಪ್ರದೇಶದಲ್ಲಿ ಗುರುವಾರ ಪ್ರಯಾಣಿಕರ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಂ ಜಿಲ್ಲೆಯಲ್ಲಿ ಬಂದೂಕುಧಾರಿಗಳು ವಾಹನಗಳ ಮೇಲೆ ಹೊಂಚುದಾಳಿ ನಡೆಸಿದ್ದಾರೆ. ವಾಹನಗಳು ಪರಾಚಿನಾರ್ ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೇಶಾವರಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ, ಉಗ್ರರು ಗುಂಡಿನ ದಾಳಿ ನಡೆಸಿದರು.
ದಾಳಿಯಲ್ಲಿ ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಮತ್ತು 20 ಜನರು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಹೆಚ್ಚಿನವರು ಶಿಯಾ ಸಮುದಾಯಕ್ಕೆ ಸೇರಿದವರು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

