
ಇಸ್ಲಾಮಾಬಾದ್: ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಇಳಿಯುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಕಾಲು ಮುರಿದುಕೊಂಡಿದ್ದಾರೆ.
ವಿಮಾನದಿಂದ ಇಳಿಯುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಬಿದ್ದ ಪರಿಣಾಮ ಅವರ ಕಾಲು ಮುರಿದಿದ್ದು, ವೈದ್ಯರು ನಾಲ್ಕು ವಾರಗಳ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ದುಬೈ ವಿಮಾನ ನಿಲ್ದಾಣದಲ್ಲಿ ಆಸಿಫ್ ಅಲಿ ಜರ್ದಾರಿ ವಿಮಾನದಿಂದ ಇಳಿಯುವಾಗ ಆಯತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದು, ತಪಾಸಣೆಯ ಸಂದರ್ಭದಲ್ಲಿ ಅವರ ಕಾಲು ಮುರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ 4 ವಾರ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿರುವುದಾಗಿ ಪಾಕಿಸ್ತಾನ ಸರ್ಕಾರ ತಿಳಿಸಿದೆ.