![](https://kannadadunia.com/wp-content/uploads/2021/11/Model-photo-shoot-in-Pakistan-Gurdwara.jpg)
ಕರ್ತಾಪುರ ಸಾಹಿಬ್ ಗುರುದ್ವಾರವು ಪಾಕಿಸ್ತಾನದಲ್ಲಿ ನೆಲೆಸಿರುವ ಸಿಖ್ಖರ ಪವಿತ್ರ ಧಾರ್ಮಿಕ ಸ್ಥಳವಾಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿರುವ ಗುರುದ್ವಾರಗಳಿಗೆ ಭೇಟಿ ನೀಡಬೇಕು ಎಂದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳೋದು ಕಡ್ಡಾಯವಾಗಿದೆ.
ಇಂಟರ್ನೆಟ್ನಲ್ಲಿ ಸಿಖ್ಖರು ಮಾಡೆಲ್ ಹಾಗೂ ಮನ್ನತ್ ಬ್ರ್ಯಾಂಡ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕುತ್ತಿದ್ದಂತೆಯೇ ಎಚ್ಚೆತ್ತ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರವು ಈ ಸಂಬಂಧ ತನಿಖೆಗೆ ಆದೇಶ ನೀಡಿದೆ. ಹಾಗೂ ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪಂಜಾಬ್ ಪ್ರಾಂತ್ಯದ ಸಿಎಂ ಉಸ್ಮಾನ್ ಬುಜ್ದಾರ್ ಈ ಘಟನೆ ಸಂಬಂಧ ಕಠಿಣ ನೋಟಿಸ್ ಜಾರಿ ಮಾಡಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ಘಟನೆ ಸಂಬಂಧ ಸಂಪೂರ್ಣ ವಿವರಣೆ ಕೇಳಿದ್ದಾರೆ. ಈ ಸಂಬಂಧ ಶೀಘ್ರದಲ್ಲೇ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಲಾಗಿದೆ.