ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ನ್ಯೂಸ್ ಆಂಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ 26 ವರ್ಷದ ಮರ್ವಿಯ ಮಲ್ಲಿಕ್ ಅವರ ಮೇಲೆ ನಿವಾಸದ ಸಮೀಪದಲ್ಲೇ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಅವರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರದಂದು ಲಾಹೋರ್ ನಲ್ಲಿ ಈ ಘಟನೆ ನಡೆದಿದ್ದು, ಮರ್ವಿಯ ಮಲ್ಲಿಕ್ ತಮ್ಮ ನಿವಾಸದ ಬಳಿ ಇದ್ದಾಗ ಶಸ್ತ್ರಸಜ್ಜಿತ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಅವರು ಈ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
2018 ರಲ್ಲಿ ನ್ಯೂಸ್ ಆಂಕರ್ ಆಗಿ ಮರ್ವಿಯ ಮಲ್ಲಿಕ್ ನೇಮಕಗೊಂಡ ಬಳಿಕ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಹಿನ್ನಲೆಯಲ್ಲಿಯೇ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಪ್ರಸ್ತುತ ಅವರು ಲಾಹೋರ್ ನಿಂದ ಅಜ್ಞಾತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.2018 ರಲ್ಲಿ ನ್ಯೂಸ್ ಆಂಕರ್ ಆಗಿ ಮರ್ವಿಯ ಮಲ್ಲಿಕ್ ನೇಮಕಗೊಂಡ ಬಳಿಕ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಹಿನ್ನಲೆಯಲ್ಲಿಯೇ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಪ್ರಸ್ತುತ ಅವರು ಲಾಹೋರ್ ನಿಂದ ಅಜ್ಞಾತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.