ನವದೆಹಲಿ: ಪಂಜಾಬ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಪಾಕಿಸ್ತಾನದ ಐಎಸ್ಐ ಬೆಂಬಲಿತ ಭಯೋತ್ಪಾದಕ ಘಟಕವನ್ನು ಭೇದಿಸಲಾಗಿದ್ದು, 4 ಜನ ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಕೆನಡಾ ಮೂಲದ ಅರ್ಶ್ ದಲ್ಲಾ ಮತ್ತು ಆಸ್ಟ್ರೇಲಿಯಾ ಮೂಲದ ಗುರ್ಜಂತ್ ಸಿಂಗ್ ಗೆ ಸಂಬಂಧಿಸಿದ ನಾಲ್ವರು ಸದಸ್ಯರನ್ನು ಬಂಧಿಸಲಾಗಿದೆ.
ಭಯೋತ್ಪಾದಕರಿಂದ 3 ಹ್ಯಾಂಡ್ ಗ್ರೆನೇಡ್ ಗಳು, 1 ಐಇಡಿ, ಎರಡು 9 ಎಂಎಂ ಪಿಸ್ತೂಲ್ ಗಳು ಮತ್ತು 40 ಲೈವ್ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ದೆಹಲಿ ಪೊಲೀಸರ ಸಹಾಯದಿಂದ ಪಾಕಿಸ್ತಾನ ಮೂಲದ ಐಎಸ್ಐ ಬೆಂಬಲಿತ ಭಯೋತ್ಪಾದಕ ಘಟಕ ಭೇದಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಾಹಿತಿ ನೀಡಿದ್ದಾರೆ.