ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆಯಲ್ಲಿ ಅರಮನೆ ಭೂಮಿಗೆ ಟಿಡಿಆರ್ ನೀಡುವ ವಿಚಾರದಲ್ಲಿ ತಿಕ್ಕಾಟ ಉಂಟಾಗಿದೆ.
ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸುವ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಣಯ ಕೈಗೊಳ್ಳಬೇಕಿದೆ. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈಬಿಡುವ ಸಾಧ್ಯತೆ ಇದೆ.
ರಸ್ತೆ ಆಗಲೀಕರಣ ಮಾಡದೇ ಇರಲು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಟಿಡಿಆರ್ ನೀಡಿದರೆ ಮುಂದಿನ ಸ್ವಾಧೀನ ಪ್ರಕ್ರಿಯೆಗಳಿಗೆ ಮಾನದಂಡ ಆಗುವ ಆತಂಕವಿದೆ. ಹೀಗಾಗಿ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಸರ್ಕಾರ ನಿರ್ಧರಿಸಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಲು ಸರ್ಕಾರ ತೀರ್ಮಾನಿಸಲಿದೆ ಎಂದು ಹೇಳಲಾಗಿದೆ.