ಪಾಲ್ಘರ್: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್ನಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ.
ಮಗು ಮತ್ತು ಆಕೆಯ ತಾಯಿಗೆ ವಾಹನದೊಳಗೆ ಕಿರುಕುಳ ನೀಡಲಾಗುತ್ತಿತ್ತು. ಈ ಸಂದರ್ಭದಲ್ಲಿ ದುರುಳರು ಪುಟ್ಟ ಬಾಲಕಿಯನ್ನು ಹೊರಕ್ಕೆ ಎಸೆದಿದ್ದು, ಆಕೆ ಸಾವನ್ನಪ್ಪಿದ್ದಾಳೆ.
ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮತ್ತು ಇತರರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 304 ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನೆಯಲ್ಲಿ ಮಹಿಳೆಯ 10 ತಿಂಗಳ ಮಗು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ.