alex Certify Shocking News: ಕ್ಯಾಬ್‌ ನಲ್ಲೇ ಮಹಿಳೆ ಮೇಲೆ ದೌರ್ಜನ್ಯ; ಮಗು ಹೊರಕ್ಕೆಸೆದು ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಕ್ಯಾಬ್‌ ನಲ್ಲೇ ಮಹಿಳೆ ಮೇಲೆ ದೌರ್ಜನ್ಯ; ಮಗು ಹೊರಕ್ಕೆಸೆದು ಹತ್ಯೆ

ಪಾಲ್ಘರ್: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರಗೆ ಎಸೆದಿರುವ ಘಟನೆ ನಡೆದಿದೆ.

ಮಗು ಮತ್ತು ಆಕೆಯ ತಾಯಿಗೆ ವಾಹನದೊಳಗೆ ಕಿರುಕುಳ ನೀಡಲಾಗುತ್ತಿತ್ತು. ಈ ಸಂದರ್ಭದಲ್ಲಿ ದುರುಳರು ಪುಟ್ಟ ಬಾಲಕಿಯನ್ನು ಹೊರಕ್ಕೆ ಎಸೆದಿದ್ದು, ಆಕೆ ಸಾವನ್ನಪ್ಪಿದ್ದಾಳೆ.

ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮತ್ತು ಇತರರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 304 ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಘಟನೆಯಲ್ಲಿ ಮಹಿಳೆಯ 10 ತಿಂಗಳ ಮಗು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...