ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 35 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಭಾನುವಾರ ತಡರಾತ್ರಿ ಜವ್ಹಾರ್ ತಾಲೂಕಿನ ಖಿರೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ವ್ಯಕ್ತಿಯನ್ನು ಬಂಧಿಸಲಾಗಿದೆ.
32 ವರ್ಷದ ಪತ್ನಿ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ಅನುಮಾನಗೊಂಡ ವ್ಯಕ್ತಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಸಂಜಯ್ ಬ್ರಹ್ಮಾನೆ ತಿಳಿಸಿದ್ದಾರೆ.