alex Certify ಸೋಷಿಯಲ್ ಮೀಡಿಯಾದಲ್ಲಿ ಪರಿಚಿತನಾದವನಿಂದ ವಿವಾಹಿತ ಮಹಿಳೆಯ ಅಪಹರಣ; 2 ಲಕ್ಷಕ್ಕೆ ಮತ್ತೊಬ್ಬನಿಗೆ ಮಾರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಷಿಯಲ್ ಮೀಡಿಯಾದಲ್ಲಿ ಪರಿಚಿತನಾದವನಿಂದ ವಿವಾಹಿತ ಮಹಿಳೆಯ ಅಪಹರಣ; 2 ಲಕ್ಷಕ್ಕೆ ಮತ್ತೊಬ್ಬನಿಗೆ ಮಾರಾಟ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿ, ವಿವಾಹಿತ ಮಹಿಳೆಯನ್ನ ಮತ್ತೊಬ್ಬರೊಂದಿಗೆ ಮದುವೆ ಮಾಡಿಸಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

ಪಾಲ್ಘರ್ ಜಿಲ್ಲೆಯ 23 ವರ್ಷದ ವಿವಾಹಿತ ಮಹಿಳೆಯನ್ನು ಅಪಹರಿಸಿ ರಾಜಸ್ತಾನದಲ್ಲಿ 2 ಲಕ್ಷ ರೂಪಾಯಿಗೆ ಆಕೆಯನ್ನ ಮಾರಾಟ ಮಾಡಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದ. ಆಕೆಯನ್ನ ರಕ್ಷಿಸಿರೋದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ಪೊಲೀಸರು ಇತರ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅರ್ನಾಲ ಸಾಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಕೆಲ ಸಮಯದ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದನು. ಆಕೆಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದ. ಆಕೆಯನ್ನು ರಾಜಸ್ಥಾನಕ್ಕೆ ಕರೆದೊಯ್ದು 2 ಲಕ್ಷ ರೂ.ಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿಸಿದ್ದ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...