ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿಗಳಲ್ಲಿ ಆಹಾರ ತಯಾರಿಸಲು ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸೂರ್ಯಕಾಂತಿ ಎಣ್ಣೆ ಖರೀದಿಗೆ 66.4 ಕೋಟಿ ರೂ. ವೆಚ್ಚವಾಗಲಿದ್ದು, ಟೆಂಡರ್ ಕರೆದು ಸೂರ್ಯಕಾಂತಿ ಎಣ್ಣೆ ಖರೀದಿಗೆ ಅನುಮೋದನೆ ನೀಡಲಾಗಿದೆ.