alex Certify ‘ಯಾವುದೇ ಕಾರಣಕ್ಕೂ ‘ಪಂಚ ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ’ : ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಯಾವುದೇ ಕಾರಣಕ್ಕೂ ‘ಪಂಚ ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ’ : ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ

ಬೆಂಗಳೂರು : ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವಿಜಯನಗರ ಬಸ್/ಮೆಟ್ರೊ ನಿಲ್ದಾಣದ ಬಳಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ನಿರ್ಮಿಸಿರುವ ಹವಾನಿಯಂತ್ರಿತ ಮಾರುಕಟ್ಟೆ “ಕೃಷ್ಣದೇವರಾಯ ಪಾಲಿಕೆ ಬಜಾರ್” ಅನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇಡೀ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಹೇಳಿದ್ದರು. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ವಿರುದ್ಧವಾಗಿದ್ದಾರೆ. ಶಕ್ತಿ, ಅನ್ನ ಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ಯ್ರ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ.

ಅಭಿವೃದ್ಧಿ ಯೋಜನೆಗಳಿಗೆ 1 ಲಕ್ಷದ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಜೂರು ಮಾಡಿದ್ದೇವೆ. ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಬ್ರಾಂಡ್ ಬೆಂಗಳೂರು ಮಾಡುವುದು ನಮ್ಮ ಉದ್ದೇಶ. ಆ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಬೆಂಗಳೂರು ನಗರಕ್ಕೆ ಪಾಲಿಕೆ ಬಜಾರ್ ಭೂಷಣ. ಶಾಸಕರಾದ ಕೃಷ್ಣಪ್ಪನವರು ಜನಪರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...