alex Certify BIG NEWS: ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವಾಗಲೇ ಮತ್ತೊಂದೆಡೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡಿದೆ. ನಾಳೆ ಬಸವ ಜಯಮೃತ್ಯುಂಜಯ ಸ್ವಾಮಿಜಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿ ವಿಚಾರ ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿದೆ. ಈ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದುರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಸ್ಪಷ್ಟಪಡಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...