ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖಂಡರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.
ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸುಮಾರು 2 ಗಂಟೆಯಿಂದ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದು, ಮುನ್ನೆಚ್ಚರಿಕೆಯಿಂದ ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ಕರೆಸಲಾಗಿದೆ.