ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಬಳಿ ಡಿ.9ರಂದು ನಡೆದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಇಂದು ಬೆಳಗಾವಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಪ್ರಂಚಮಸಾಲಿ ಸಮುದಾಯದವರು ಪ್ರತಿಭಟನೆ ತಿವ್ರಗೊಳಿಸಿದ್ದಾರೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಪ್ರತಿಯೊಂದು ಹಳ್ಳಿಗಳಲ್ಲಿ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಚಮಸಾಲಿ ರೈತ ಮುಖಂಡರ ಮೇಲೆ, ಅನ್ನದಾತರ ಮೇಲೆ ಪೊಲೀಸರು ಮನಬಂದಂತೆ ಲಾಠಿಚಾರ್ಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವಜಯ ಮೃತ್ಯುಂಜಯ ಸ್ವಾಮಿಜಿ, 2 ಮೀಸಲಾತಿಗಾಗಿ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಪೊಲಿಸರ ಈ ಕ್ರಮದಿಂದ ನಮ್ಮವೌ ಇನ್ನಷ್ಟು ಆಕ್ರೋಶಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾನವೀಯತೆಯನ್ನು ಮರೆತಿ ಈ ರೀತಿ ವರ್ತಿಸಿದ್ದು ಸರಿಯಲ್ಲ. ಇಷ್ಟು ದಿನ ನಮ್ಮದು ಶಾಂತಿಯುತ ಹೋರಾಟವಾಗಿತ್ತು. ಇನ್ಮುಂದೆ ಹಳ್ಳಿ ಹಳ್ಳಿಗಳಲ್ಲಿಯೂ ಕ್ರಾಂತಿಯುತ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.