
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. 2ಡಿ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆ ನಂತ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.