ಬೆಂಗಳೂರು: ಸದ್ಯಕ್ಕೆ ಮೀಸಲಾತಿ ನೀಡಲು ಸಾಧ್ಯವಿಲ್ಲ. ಪಂಚಮಸಾಲಿ ಅಷ್ಟೇ ಅಲ್ಲ, ಸದ್ಯಕ್ಕೆ ಯಾವುದೇ ಸಮುದಾಯದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ಪರವಾಗಿ ಸಚಿವರು ಪಂಚಮಸಾಲಿ ಶ್ರೀಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ ಎನ್ನಲಾಗಿದ್ದು, ಇದನ್ನು ಒಪ್ಪದ ಸಮುದಾಯದ ಮುಖಂಡರು ಹೋರಾಟ ತೀವ್ರಗೊಳಿಸಲು ನಿರ್ಧರಿಸಿದ್ದಾರೆ.
2 ಎ ಮೀಸಲಾತಿಗಾಗಿ ಸರ್ಕಾರದ ವಿರುದ್ಧ ಪಂಚಮಸಾಲಿ ಸಮುದಾಯದವರು ಮತ್ತೆ ಸಿಡಿದೆದ್ದಿದ್ದಾರೆ. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಮತ್ತೊಂದು ಸುತ್ತಿನ ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸರ್ಕಾರದ ಮೇಲೆ ಒತ್ತಡ ತರಲು ಹೋರಾಟ ಮುಂದುವರೆಸಲಾಗುವುದು. ನಿನ್ನೆ ನಡೆದ ರೌಂಡ್ ಟೇಬಲ್ ಮೀಟಿಂಗ್ ನಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮೀಸಲಾತಿಗಾಗಿ ಒತ್ತಾಯಿಸಿ ಪಾದಯಾತ್ರೆ, ಬೃಹತ್ ಸಮಾವೇಶ ನಡೆಸಿ ಧರಣಿ ಕೈಗೊಂಡಿರುವ ಪಂಚಮಸಾಲಿ ಸಮುದಾಯದ ಶ್ರೀಗಳ ನೇತೃತ್ವದಲ್ಲಿ ಹೋರಾಟ ಮುಂದುವರೆಸಲಾಗುವುದು. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೇಳಲಾಗಿದೆ.