ಬೆಳಗಾವಿ: ಡಿಸೆಂಬರ್ 29 ಕ್ಕೆ 2ಎ ಮೀಸಲಾತಿ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಡಿಸೆಂಬರ್ 29ರಂದು ಅಧಿಕೃತವಾಗಿ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ.
ಸುವರ್ಣಸೌಧದ ಸಮೀಪ ರಾಘವೇಂದ್ರ ಲೇಔಟ್ ನಲ್ಲಿ ನಡೆದ ಪಂಚಮಸಾಲಿ ಸಮುದಾಯದ ಸಮಾವೇಶದಲ್ಲಿ ಅವರು ಮಾತನಾಡಿ, ಡಿಸೆಂಬರ್ 28ರಂದು ಸರ್ವ ಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದು, ಮೀಸಲಾತಿ ಬಗ್ಗೆ ಸ್ಪಷ್ಟ ಭರವಸೆ ನೀಡಿದ್ದಾರೆ ಎಂದರು.
ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಡಿಸೆಂಬರ್ 29ಕ್ಕೆ ಮೀಸಲಾತಿ ಅಧಿಕೃತವಾಗಿ ಘೋಷಿಸುವುದಾಗಿ ಸಿಎಂ ತಿಳಿಸಿದ್ದಾರೆ. ಡಿಸೆಂಬರ್ 29ರಂದು ಹೆಚ್ಚು ಕಡಿಮೆಯಾದರೆ ಸುಮ್ಮನಿರುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಬಸವನಗೌಡ ಪಾಟೀಲ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.