
ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೊಮ್ಮೆ ಹೋರಾಟಕ್ಕೆ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ, ಲಿಂಗಾಯಿತರಿಗೆ ಒಬಿಸಿ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಕೇಳಿಕೊಳ್ಳಲಾಗಿದೆ. ಆದರೆ ಅವರು ನಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು.
2ಎ ಮೀಸಲಾತಿ ರಾಜ್ಯ ಸರ್ಕಾರದ ಕೈಯಲ್ಲಿದೆ. ಒಬಿಸಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಕೇಂದ್ರ ಸರ್ಕಾರ ಮೀಸಲಾತಿ ಘೋಷಿಸಬೇಕು. ಎರಡೂ ಕಡೆ ಎರಡೂ ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿವೆ. ಈಗ ಲೋಕಸಭಾ ಚುನಾವಣೆ ಸಮೀಪಿದಲ್ಲಿದೆ. ಈಗಲಾದರೂ ನಮ್ಮ ಬೇಡಿಕೆ ಈಡೆರಿಸಬೇಕು. ಇಲ್ಲವಾದಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.