alex Certify BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಳೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಮಲೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಸಾವನ್ನಪ್ಪಿದ ಬಾಲಕ. ಮಾರ್ಚ್ 15 ರಂದು ಮಲೆಬೆನ್ನೂರಿನಲ್ಲಿ ಘಟನೆ ನಡೆದಿತ್ತು. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಉಪವಾಸ ಇದ್ದ ಮಕ್ಕಳು ನಂತರ ಜಾಮಿಯಾ ಮಸೀದಿ ಬಳಿ ಪಾನಿಪುರಿ ಸೇವಿಸಿದ್ದರು. ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿದ್ದ 19 ಮಕ್ಕಳು ಆಸ್ಪತ್ರೆ ಸೇರಿದ್ದರು.

ಈ ಪೈಕಿ ನಾಲ್ವರಿಗೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...