
ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನೆ ಆರೋಪದಡಿ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ವಿರುದ್ಧ ದೂರು ನೀಡಲಾಗಿದೆ.
ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ವಿರುದ್ಧ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರಪನಹಳ್ಳಿ ತಾಲ್ಲೂಕು ಬಿಜೆಪಿ ಘಟಕದಿಂದ ದೂರು ದಾಖಲಿಸಲಾಗಿದೆ. ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.