ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ ಖಾಲಿ ಇವೆ. ಬೆಂಗಳೂರು ನಗರದ 2500 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಇತರೆ ಭಾಗಗಳಿಗೆ 3500 ಪೊಲೀಸರನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಉಳಿದ 10 ಸಾವಿರ ಹುದ್ದೆಗಳನ್ನು ಕೂಡ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಹೇಳಿದ್ದಾರೆ.