alex Certify ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 7000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 20 ಸಾವಿರ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಒಟ್ಟು 16,000 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ ಖಾಲಿ ಇವೆ. ಬೆಂಗಳೂರು ನಗರದ 2500 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಇತರೆ ಭಾಗಗಳಿಗೆ 3500 ಪೊಲೀಸರನ್ನು ನೇಮಕಾತಿ ಮಾಡಿಕೊಳ್ಳಲು ಒಪ್ಪಿಗೆ ನೀಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಿದ್ದು, ಉಳಿದ 10 ಸಾವಿರ ಹುದ್ದೆಗಳನ್ನು ಕೂಡ ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...