ಬೆಂಗಳೂರು : ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸಿಹಿಸುದ್ದಿ ನೀಡಿದ್ದು, ಪೊಲೀಸ್ ಸಿಬ್ಬಂದಿಗೆ ನೀಡುವಂತೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕಷ್ಟ ಪರಿಹಾರ ಭತ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಆರ್. ಎ. ಮುಂಡ್ಕರ್ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಅಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳು, ರಾಜ್ಯ ವಿಪತ್ತು ಸ್ಪಂದನಾ ಪಡೆಯ ಕಾರ್ಯ ಶ್ಲಾಘನಿಯ. ಇವರ ಸೇವೆ ಪರಿಗಣಿಸಿ ಪೊಲೀಸರಿಗೆ ನೀಡುವಂತೆ ತುರ್ತು ಸೇವೆಗಳ ಸಿಬ್ಬಂದಿಗೂ ಕಷ್ಟಪರಿಹಾರ ಭತ್ಯೆ ನೀಡಲಾಗುವುದು ಎಂದು ಘೋಷಿಸಿದ್ದಾರ.ೆ
ಇನ್ನು ಪೊಲೀಸ್ ಇಲಾಖೆಯ ವಾಹನಗಳಿಗೆ ಇಂಧನ ತುಂಬಿಸಿಕೊಳ್ಳಲು ಅನುಕೂಲವಾಗಿರುವ ರೂಪೆ ಕಾರ್ಡ್ ಸೌಲಭ್ಯವನ್ನು ಅಗ್ನಿ ಶಾಮಕ ಇಲಾಖೆಗೂ ನೀಡಲಾಗುವುದು ಎಂದು ಹೇಳಿದ್ದಾರೆ.