
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನ್ಡೆಸಿದ್ದಾರೆ.
50ಕ್ಕೂ ಹೆಚ್ಚು ಸಿಸಿಬಿ ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಿಂದಲೇ ಕೊಲೆಗೆ ಸುಪಾರಿ, ಉಗ್ರ ಚಟುವಟಿಗಳಿಗೆ ನಂಟು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವಕ್ಕೆ ಸಂಚು ನಡೆಸುತ್ತಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಜೈಲಿನ ಎಲ್ಲಾ ಬ್ಯಾರಕ್ ಗಳ ಮೇಲೂ ದಾಳಿ ನಡೆಸಲಾಗಿದ್ದು, ಈ ವೇಳೆ ಕೈದಿ ಬಲಿದ್ದ 40 ಸಾವಿರ ಹಣ, 3 ಚಾಕು ವಶಕ್ಕೆ ಪಡೆಯಲಾಗಿದೆ.