
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಉಪಸ್ಥಿತರಿದ್ದರು.
ಅಗಾಧ ನೈಸರ್ಗಿಕ ಸಂಪತ್ತು, ಸುಂದರ ಕಡಲ ತೀರಗಳು, ಧಾರ್ಮಿಕ ತಾಣಗಳನ್ನು ಹೊಂದಿರುವ ಕರಾವಳಿಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿದ್ದು, ಈ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿಗೆಂದು ವಿಶೇಷ ಮಾಸ್ಟರ್ ಪ್ಲಾನ್ ರೂಪಿಸಿ, ಅದನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.