alex Certify Shocking Video: ಕಾಲೇಜಿನ ಬಳಿ ಪುಂಡರ ಹಾವಳಿ; ಮಗಳನ್ನು ಕರೆದೊಯ್ಯಲು ಬಂದ ಅಪ್ಪನ ಮೇಲೆ ಅಟ್ಯಾಕ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video: ಕಾಲೇಜಿನ ಬಳಿ ಪುಂಡರ ಹಾವಳಿ; ಮಗಳನ್ನು ಕರೆದೊಯ್ಯಲು ಬಂದ ಅಪ್ಪನ ಮೇಲೆ ಅಟ್ಯಾಕ್​

ಮಧುರೈ: ಕಾಲೇಜಿಗೆ ಹೋದ ಮಗಳನ್ನು ಕರೆದುಕೊಂಡು ಹೋಗಲು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಭಯಾನಕ ಘಟನೆ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದಿದೆ.

ತಮ್ಮ ಮಗಳನ್ನು ಕರೆದುಕೊಂಡು ಹೋಗಲು ಕಾಲೇಜಿಗೆ ಬಂದಿದ್ದ ಪಿ. ಸೆಂಥಮಿಲ್​ ಪಂಡಿಯನ್​ ಎಂಬ 50 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದ್ದು, ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಈ ವ್ಯಕ್ತಿಗೆ ಹೆಲ್ಮೆಟ್​ನಿಂದ ದಾಳಿ ಮಾಡಿರುವುದಾಗಿ ವರದಿಯಾಗಿದೆ.

ಪ್ರತಿನಿತ್ಯವೂ ಪುಂಡರ ಗುಂಪು ಈ ಕಾಲೇಜಿಗೆ ಬಂದು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ವಿದ್ಯಾರ್ಥಿನಿಗೆ ಕೂಡ ಹೀಗೆಯೇ ಆಗುತ್ತಿರುವ ಹಿನ್ನೆಲೆಯಲ್ಲಿ ಈಕೆಯ ತಂದೆಯೇ ಖುದ್ದು ಬಂದು ಮಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಇದನ್ನು ಸಹಿಸದ ಪುಂಡನೊಬ್ಬ ಹೆಲ್ಮೆಟ್​ನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಪೊಲೀಸರು ಕೇಸ್​ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡುತ್ತಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...