ರಾಮನಗರ : ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ ಮನನೊಂದ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ರಾಮನಗರದ ಹೊರವಲಯದ ಕುಂಬಾಪುರ ಗೇಟ್ ಬಳಿ ನಡೆದಿದೆ.
ಮೃತರನ್ನು ನವ್ಯ (19) ಹರ್ಷವರ್ಧನ (20) ಎಂದು ಗುರುತಿಸಲಾಗಿದೆ. ನವ್ಯ ಹರ್ಷವರ್ಧನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಪೋಷಕರು ಮದುವೆಗೆ ಒಪ್ಪದ ಹಿನ್ನೆಲೆ ಮನನೊಂದು ಕುಂಬಾಪುರ ಗೇಟ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.