ಕಲಬುರಗಿ : ಗಾಳಿಪಟ ಹಾರಿಸಲು ಹೋದ ಬಾಲಕ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ನವನಿಹಾಳ ಖೀರುನಾಯಕ ತಾಂಡಾದಲ್ಲಿ ನಡೆದಿದೆ.
ಮೃತ ಬಾಲಕನನ್ನು ಆದಿತ್ಯ ಗಜಾನಂಧ ಜಾಧವ (15) ಎಂದು ಗುರುತಿಸಲಾಗಿದೆ. ಸ್ವಾಮಿ ವಿವೇಕಾನಂದ ಪ್ರೌಢಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ ಬಾಲಕ ಮನೆಯ ಮಹಡಿ ಹತ್ತಿ ಗಾಳಿಪಟ ಹಾರಿಸಲು ಮುಂದಾಗಿದ್ದಾನೆ. ಈ ವೇಳೆ ಆಯತಪ್ಪಿ ಮಹಡಿ ಮೆಟ್ಟಿಲಿನಿಂದ ಬಿದ್ದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.