ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಮಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲಾಗ್ತಿದೆ. ಡಿ.ಕೆ. ಶಿವಕುಮಾರ್ ಮಗಳನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಪೋಷಕರು ದೂರಿದ್ದಾರೆ.
ಅವರು ಬೆಂಗಳೂರಿಂದ ಹೊರಟು ತಡರಾತ್ರಿ 3 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ಜೊತೆ ನೇರವಾಗಿ ಎಪಿಎಂಸಿ ಠಾಣೆಗೆ ಆಗಮಿಸಿದ್ದಾರೆ. ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ ಪೊಲೀಸರ ತಂಡ ಅವರನ್ನು ಕರೆತಂದಿದೆ.
ಜೀಪ್ ಸೇರಿ ನಾಲ್ಕು ವಾಹನಗಳಲ್ಲಿ ಆಗಮಿಸಿ ಸುಮಾರು ಒಂದೂವರೆ ಗಂಟೆ ಕಾಲ ಠಾಣೆಯಲ್ಲಿದ್ದರು. ಬಳಿಕ ಎಪಿಎಂಸಿ ಪೊಲೀಸರಿಗೆ ಪೋಷಕರನ್ನು ಹಸ್ತಾಂತರಿಸಲಾಗಿದೆ. ಪ್ರಕ್ರಿಯೆ ಮುಗಿದ ಬಳಿಕ ಯುವತಿ ಪೋಷಕರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಸ್ವಂತ ಊರು ಬಿಟ್ಟು ಇಲ್ಲಿಗ್ಯಾಕೆ ಬಂದಿದ್ದೀರಿ ಎಂದು ಪ್ರಶ್ನೆ ಮಾಡಿದ್ದು ಬೆಳಗಾವಿಯಲ್ಲಿಯೇ ಕೆಲಸ ಮಾಡುತ್ತಿರುವುದಾಗಿ ಪೋಷಕರು ಹೇಳಿದ್ದಾರೆ. ಭದ್ರತೆಯ ಬಗ್ಗೆ ವಿಚಾರಿಸಿದ್ದಾರೆ. ಠಾಣೆಯಲ್ಲಿದ್ದ ಸಂದರ್ಭದಲ್ಲಿ ಯುವತಿ ಪೋಷಕರು ಕಣ್ಣೀರಿಟ್ಟಿದ್ದು, ಮನೆಗೆ ತೆರಳಿದ್ದಾರೆ. ಶೀಘ್ರವೇ ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೋಡುವುದಾಗಿ ಹೇಳಿದ್ದಾರೆ.