ಚಿತ್ರದುರ್ಗ: ಪತಿಯನ್ನು ಬಿಟ್ಟು ಪ್ರಿಯಕರನ ಜೊತೆಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಪ್ರಿಯಕರನೇ ಹಲ್ಲೆ ಮಾಡಿ ಮಹಿಳೆ ದಿವ್ಯಾ ಅವರನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಿಯಕರ ಮಂಜುನಾಥನ ವಿರುದ್ಧ ದಿವ್ಯಾ ಪೋಷಕರು ಹೀಗೆಂದು ಗಂಭೀರ ಆರೋಪ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಸ್ಪತ್ರೆಯಲ್ಲಿ ದಿವ್ಯಾ ಮೃತಪಟ್ಟಿದ್ದಾರೆ. ಮೃತಪಟ್ಟ ದಿವ್ಯಾ ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಪ್ರಿಯಕರ ಮಂಜುನಾಥನೇ ಕೊಲೆ ಮಾಡಿದ್ದಾನೆ ಎಂದು ಮಂಜುನಾಥನ ವಿರುದ್ಧ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಪೋಷಕರ ಆರೋಪವನ್ನು ನಿರಾಕರಿಸಿರುವ ಮಂಜುನಾಥ್ ಜ್ವರ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ದಿವ್ಯಾ ಅವರ ಸಾವಿನಿಂದ ಮನನೊಂದು ನಾನು ಕೂಡ ವಿಷ ಸೇವಿಸಿದ್ದೇನೆ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಹೇಳಿಕೆ ನೀಡಿದ್ದಾನೆನ್ನಲಾಗಿದ್ದು, ಪೊಲೀಸರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.