ಬೆಂಗಳೂರು : 2024-25 ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಆಟಲ್ ಬಿಹಾರಿ ವಾಜಪೇಯಿ /ಇಂದಿರಾ ಗಾಂಧಿ / ಡಾ|| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು, ದಿನಾಂಕ: 07-12-2023 ರ ಬೆಳಿಗ್ಗೆ 11.00 ರಿಂದ 31-12-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ: 18-02-2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ.
ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಕೆಳಕಂಡಂತಿದೆ.
ವಿದ್ಯಾರ್ಥಿಯ ವರ್ಗ
ಪ.ಜಾತಿ / ಪರಿಶಿಷ್ಟ ವರ್ಗ : 2,50,000/-
ಹಿಂ.ವರ್ಗದ ಪ್ರವರ್ಗ-1 : 2,50,000/-
ಹಿಂ.ವರ್ಗ 2ಎ, 2ಬಿ, 3ಎ ಮತ್ತು 3ಬಿ : 1,00,000/-
ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ http://kea.kar.nic.in ag #鳥 & gre on 2024” ವನ್ನು ಪ್ರಾಧಿಕಾರದ ವೆಬ್‌ಸೈಟ್: : http://kreis.kar.nic.in ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ದಿನಾಂಕ: 01-02-2024 ರಿಂದ ಈ ಮೇಲ್ಕಂಡ ವೆಬ್‌ಸೈಟ್‌ಗಳಿಂದ ಆಯಾ ವಸತಿ ಶಾಲೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಗಮನಿಸಿ: ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ. ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು.
ಪ್ರವೇಶ ಪರೀಕ್ಷೆ – 2024 ರ ವೇಳಾಪಟ್ಟಿ
18-02-2024 ಭಾನುವಾರ
ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ
ಅಂಕಗಳು : 100
ವಸತಿ ಶಾಲೆಗಳ ಆಯ್ಕೆಯ ಆದ್ಯತಾ ಕ್ರಮದಲ್ಲಿ ನಮೂದಿಸುವ ಕುರಿತು: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು.
ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerized Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು.