alex Certify ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ 6 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ 6  ಕೊನೆಯ ದಿನ

ಬೆಂಗಳೂರು : ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿನ ವಸತಿ ಶಾಲೆಗಳಿಗೆ  2024-25 ನೇ ಸಾಲಿನ 6  ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜನವರಿ 6  ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ಪೋಷಕರು ತಮ್ಮ ಮಕ್ಕಳ ಪರವಾಗಿ ನಿಮ್ಮ ಹತ್ತಿರದ KREIS ಅಧೀನದ ಯಾವುದೇ ಶಾಲಾ/ಕಾಲೇಜುಗಳ ಪ್ರಾಂಶುಪಾಲರ ಮೂಲಕ ಉಚಿತವಾಗಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

Student Achievement Tracking System (SATS) ಸಂಖ್ಯೆ

ಇತ್ತೀಚಿನ ಭಾವಚಿತ್ರ

ಮೀಸಲಾತಿ ಕೋರಿದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ವಿಶೇಷ ಪ್ರವರ್ಗಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪಟ್ಟಿ:

ಮೊರಾರ್ಜಿ ದೇಸಾಯಿ ವಸತಿ ಶಾಲೆ

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ

ಏಕಲವ್ಯ ಮಾದರಿ ವಸತಿ ಶಾಲೆ

ಶ್ರೀ ನಾರಾಯಣ ಗುರು ವಸತಿ ಶಾಲೆ

ಡಾ|| ಬಿ.ಆರ್ ಅಂಬೇಡ್ಕ‌ರ್ ವಸತಿ ಶಾಲೆ

ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ

ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ

ಒಟ್ಟು 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದೇ ಜನವರಿ 6 ರ ಒಳಗಾಗಿ ಹತ್ತಿರದ KREIS ವಸತಿ ಶಾಲೆಗಳಿಗೆ ತೆರಳಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24X7 ಸಹಾಯವಾಣಿ 9482300400

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...