alex Certify BIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪೋಷಕರೇ ಗಮನಿಸಿ : ರಾಜ್ಯದ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2025-26ನೇ ಸಾಲಿನಲ್ಲಿ 6 ನೇ ತರಗತಿ ಪ್ರವೇಶ ಸಂಬಂಧ ಸೇವಾ ಸಿಂಧು ಪೋರ್ಟಲ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಆಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನ 6 ನೇತರಗತಿ ಪ್ರವೇಶ ಪ್ರಕ್ರಿಯೆಯನ್ನು ಸೇವಾ ಸಿಂಧು ಪೋರ್ಟಲ್ ತಂತ್ರಾಂಶದ ಮೂಲಕ ಪ್ರಾರಂಭಿಸಲಾಗಿದ್ದು, ಅದರಂತೆ ಸೇವಾ ಸಿಂಧು Admission for Morarji Desai Residential Schools ಸೇವೆಯ ವೆಬ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ನಿರ್ದೇಶನಾಲಯದ ವತಿಯಿಂದ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಈ ಕೆಳಕಂಡ ದಿನಾಂಕಗಳನ್ನು ತಿಳಿಸಲಾಗಿತ್ತು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31.01.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.03.2025.

ಪ್ರಸ್ತುತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ದಿನಾಂಕ:25.03.2025 ಕ್ಕೆ ವಿಸ್ತರಿಸಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು ಈ ಸಂಬಂಧ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಪ್ರಾಂಶುಪಾಲರುಗಳಿಗೆ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ ಎಂದು ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...