ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಜನಪ್ರಿಯತೆ ಹೆಚ್ಚಾಗಿದೆ. ಅವರು ಹೋದಲ್ಲೆಲ್ಲ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗ್ತಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಎರಡು ವೈಯಕ್ತಿಕ ಪದಕಗಳನ್ನು ಗೆದ್ದ ನಂತರ ಅವರ ಹೆಸರು ದೇಶಾದ್ಯಂತ ಪ್ರಸಿದ್ಧವಾಗಿದೆ. ಪ್ಯಾರಿಸ್‌ನಿಂದ ಭಾರತಕ್ಕೆ ಮರಳಿದ ದಿನದಿಂದಲೂ ಅವರು ಸುದ್ದಿಯಲ್ಲಿದ್ದಾರೆ.
ಇದೀಗ 22 ವರ್ಷದ ಮನು ಭಾಕರ್ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ವಿಡಿಯೋದಲ್ಲಿ ಡಾನ್ಸ್ ಮಾಡುತ್ತಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಮನು ಕೆಲವು ಶಾಲಾ ಮಕ್ಕಳೊಂದಿಗೆ ಬಾರ್ ಬಾರ್ ದೇಖೋ ಚಿತ್ರದ ಪ್ರಸಿದ್ಧ ಗೀತೆ ‘ಕಾಲಾ ಚಷ್ಮಾ’ ಗೆ ನೃತ್ಯ ಮಾಡುವುದನ್ನು ಕಾಣಬಹುದು.
ಮನು ಭಾಕರ್, ಫ್ಯಾರಿಸ್ ನಲ್ಲಿ ನಡೆದ ಒಲಂಪಿಕ್ಸ್ ನಲ್ಲಿ ವೈಯಕ್ತಿಕ ಎರಡು ಪದಕಗಳನ್ನು ಗೆದ್ದು, ಸ್ವತಂತ್ರ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಸೃಷ್ಟಿಸಿದ್ದಾರೆ.
ಚೆನ್ನೈನ ವೇಲಮ್ಮಾಳ್ ನೆಕ್ಸಸ್ ಶಾಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಸಮಯದಲ್ಲಿ ಮಾತನಾಡಿದ ಅವರು, ಟೋಕಿಯೊ ಒಲಿಂಪಿಕ್ಸ್‌ನಿಂದ ಹಿಂದಿರುಗಿದ ನಂತರ, ನನಗೆ ಆತ್ಮವಿಶ್ವಾಸವನ್ನು ಮರಳಿ ಪಡೆಯುವುದು ತುಂಬಾ ಕಷ್ಟಕರವಾಗಿತ್ತು. ನಾನು ವಿಶ್ವದ ಎರಡನೇ ನಂಬರ್ ಆಟಗಾರನಾಗಿದ್ದೆ, ಆದರೆ ನಾನು ಅದರಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದು ಹೇಳಿದ್ದಾರೆ.