ನವದೆಹಲಿ: ನಕಲಿ ಮತದಾನ, ಚುನಾವಣೆ ಅಕ್ರಮ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದು, ನಕಲಿ ಮತದಾನ ತಡೆಯುವ ಉದ್ದೇಶದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲಾಗುತ್ತದೆ. ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಆನ್ಲೈನ್ ಮತದಾನ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.
ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಆಯ್ಕೆಯಾಗಿದೆ. ಪ್ರಸ್ತುತ ಮತದಾರರ ಚೀಟಿಗೆ ಆಧಾರ್ ಜೋಡಣೆ ಮಾಡುವುದು ಸ್ವಯಂಪ್ರೇರಿತವಾಗಿದ್ದು, ಒನ್ ನೇಷನ್ –ಒನ್ ವೋಟರ್ ಐಡಿ ಜಾರಿ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.