ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ದುಷ್ಕರ್ಮಿಗಳು ಕೃತ್ಯಕ್ಕೆ ಸಂಚುರೂಪಿಸಿದ್ದರು. ದುಷ್ಕರ್ಮಿಗಳ ತಂಡದಲ್ಲಿ 7 ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರು ಜನರನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.ನಾಲ್ವರು ಆರೋಪಿಗಳು ಗುರುಗ್ರಾಮದ ಸೆಕ್ಟರ್ 7 ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ತಂಗಿದ್ದರು. ಮೂರು ತಿಂಗಳಿಂದ ದಾಳಿಗೆ ಸಂಚು ರೂಪಿಸಿದ್ದರು.
ಸಂಸತ್ತಿನ ಭದ್ರತಾ ಲೋಪ ಸಂಚು ರೂಪಿಸುವಲ್ಲಿ ಆರು ಮಂದಿ ಭಾಗಿಯಾಗಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ಬಹಿರಂಗಪಡಿಸಿದ್ದಾರೆ. ಇನ್ನೂ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ವರು ಶಂಕಿತರಾದ ಸಾಗರ್ ಶರ್ಮಾ, ಮನೋರಂಜನ್, ನೀಲಂ(42), ಮತ್ತು ಅಮೋಲ್ (25) ಅವರನ್ನು ಪೊಲೀಸರು ಬಂಧಿಸಿದ್ದರೆ, ಝಾ ಮತ್ತು ಇನ್ನೋರ್ವ ಆರೋಪಿಯನ್ನು ಬಂಧಿಸಲು ಶೋಧವನ್ನು ಪ್ರಾರಂಭಿಸಲಾಗಿದೆ, ದೆಹಲಿ ಪೊಲೀಸರು ತಿಳಿಸಿದ್ದಾರೆ.