ನವದೆಹಲಿ: ಲೋಕಸಭೆಯಲ್ಲೂ ಹಿಜಾಬ್ ವಿಚಾರ ಪ್ರಸ್ತಾಪಿಸಲಾಗಿದೆ. ತಮಿಳುನಾಡು ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಅವರು ಶಾಲೆಗಳಲ್ಲಿ ಹಿಜಾಬ್ ಧರಿಸುವ ಮಕ್ಕಳನ್ನು ಸೇರಿಸಿಕೊಳ್ಳುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಹಿಜಾಬ್ ಬಗ್ಗೆ ಹೊಸ ನಿಯಮ ರೂಪಿಸಲಾಗುತ್ತಿದೆ. ಈ ಕುರಿತಾಗಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದ ಕೆಲವು ಜಿಲ್ಲೆಗಳ ಶಾಲೆ, ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುತ್ತಿಲ್ಲ. ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನೀಡುತ್ತಿಲ್ಲ ಇದರ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.