ನವದೆಹಲಿ: ಸಂಸತ್ ವಿಶೇಷ ಅಧಿವೇಶನ ಇಂದಿನಿಂದ ಐದು ದಿನಗಳ ಕಾಲ ನಡೆಯಲಿದೆ. ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ, ಏಕರೂಪ ನಾಗರಿಕ ಸಂಹಿತೆ ಮತ್ತು ಒನ್ ನೇಷನ್ ಒನ್ ಎಲೆಕ್ಷನ್ ಸೇರಿದಂತೆ 8 ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ.
ಸಂಸತ್ತಿನ 75 ವರ್ಷಗಳ ಹಾದಿಯ ಬಗ್ಗೆ ಚರ್ಚೆ ಮತ್ತು ನಾಲ್ಕು ಮಸೂದೆ ಮಂಡನೆ ಉದ್ದೇಶವನ್ನು ಈ ವಿಶೇಷ ಅಧಿವೇಶನದಲ್ಲಿ ಹೊಂದಿರುವುದಾಗಿ ಸರ್ಕಾರ ಹೇಳಿದೆ. ಆದರೆ, ಸಂಸತ್ ಮುಂಗಾರು ಅಧಿವೇಶನಕ್ಕೆ ಮುಗಿದು ಒಂದೂವರೆ ತಿಂಗಳು ಪೂರ್ಣವಾಗುವ ಮೊದಲೇ ವಿಶೇಷ ಅಧಿವೇಶನ ಕರೆದಿರುವುದು ಅಚ್ಚರಿಯ ನಿರ್ಧಾರ ಕೈಗೊಳ್ಳುವ ಉದ್ದೇಶವಿರಬಹುದು ಎಂದು ಹೇಳಲಾಗಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಒಂದು ದೇಶ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆಯಂತಹ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.