ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.
ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೊದಲ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ನಾಯಕ ಮತ್ತು ಸತತ 7 ಅವಧಿಯ ಸಂಸದ ಭರ್ತೃಹರಿ ಮೆಹಾತಾಬ್ ಅವರನ್ನು ನೇಮಕ ಮಾಡಲಾಗಿದೆ. ಜುಲೈ 2 ಅಥವಾ 3ರಂದು ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. ಜುಲೈ 22 ರಿಂದ ಬಜೆಟ್ ಅದಿವೇಶನ ಆರಂಭವಾಗಲಿದೆ.