ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ಕೊರೋನಾ ನಿಯಮಾವಳಿ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ.
ದೇಶದ ಜನತೆಗೆ 75 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷವಾದ ಮಹತ್ವವಿದೆ. 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆ ನಡೆದಿದೆ ಎಂದು ಹೇಳಿದ್ದಾರೆ.
ಕೊರೋನಾ ವಿರುದ್ಧ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ಈ ಬಾರಿ ಒಲಿಂಪಿಕ್ಸ್ ನಲ್ಲಿ ಹೆಚ್ಚು ಪದಕ ಗಳಿಸಿ ದಾಖಲೆ ಬರೆಯಲಾಗಿದೆ. ಕೊರೋನಾ ಎರಡನೇ ಅಲೆಯಲ್ಲಿ ಹೆಚ್ಚಿನವರು ಮೃತಪಟ್ಟಿದ್ದಾರೆ. ಆ ನೋವನ್ನು ಮರೆಯಲು ಆಗುವುದಿಲ್ಲ. ಸ್ಟ್ರಾಟಜಿ ಸಹಕಾರದಿಂದ ಜನರ ಜೀವ ಉಳಿಸಬಹುದು. ಕೊರೋನಾದಿಂದಾಗಿ ತಾತ್ಕಾಲಿಕವಾಗಿ ಆರ್ಥಿಕತೆಗೆ ಹಿನ್ನಡೆಯಾಗಿದೆ. ಭಾರತವು ಅನೇಕ ದೇಶಗಳಿಗೆ ನೆರವು ನೀಡಿದೆ ಎಂದು ಹೇಳಿದ್ದಾರೆ.
ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆದುಕೊಳ್ಳಬೇಕು. ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ ಎಂದು ರಾಮನಾಥ ಕೋವಿಂದ್ ಹೇಳಿದ್ದು, ಫ್ರಂಟ್ಲೈನ್ ವಾರಿಯರ್ಸ್ ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸೆಂಟ್ರಲ್ ವಿಸ್ತಾ ಪ್ರಜಾಪ್ರಭುತ್ವದ ಹೆಗ್ಗುರುತು. ಸಂಸತ್ ಪ್ರಜಾಪ್ರಭುತ್ವದ ದೇಗುಲ ಎಂದು ಹೇಳಿದ್ದಾರೆ.