ಯುವಕರಿಗೆ ಸಿಹಿ ಸುದ್ದಿ: ಚುನಾವಣೆ ಸ್ಪರ್ಧೆ ವಯೋಮಿತಿ 25 ರಿಂದ 18ಕ್ಕೆ ಇಳಿಕೆಗೆ ಸಲಹೆ

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸಿನ ಮಿತಿ ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದರಿಂದಾಗಿ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ ಎಂದು ಸಂಸದೀಯ ಸಮಿತಿ ಅಭಿಪ್ರಾಯಪಟ್ಟಿದೆ.

ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು 25 ರಿಂದ 18ಕ್ಕೆ ಇಳಿಸಲು ಶುಕ್ರವಾರ ಸಂಸದೀಯ ಸಮಿತಿ ಸಲಹೆ ನೀಡಿದೆ. ಬಿಜೆಪಿ ಸದಸ್ಯ ಸುಶೀಲ್ ಮೋದಿ ನೇತೃತ್ವದ ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿಯಿಂದ ಈ ಕುರಿತು ಶಿಫಾರಸು ಮಾಡಲಾಗಿದೆ.

ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ ಮೊದಲಾದ ದೇಶಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುಗಾರಿಕೆ ಕನಿಷ್ಠ ವಯೋಮಿತಿ 18 ವರ್ಷಕ್ಕೆ ಇರಬೇಕು. ಇದರಿಂದ ಯುವಕರು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ ಎಂದು ಹೇಳಲಾಗಿದೆ.

ಪ್ರಸ್ತುತ ಇರುವ ನಿಯಮಗಳ ಪ್ರಕಾರ ಲೋಕಸಭೆ ಚುನಾವಣೆ, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ 25 ವರ್ಷ, ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ 30 ವರ್ಷ, ಮತದಾರರಾಗಿ ನೋಂದಾಯಿಸಲು 18 ವರ್ಷ ಆಗಿರಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read