
ಬೆಂಗಳೂರು: ಅರೆಕಾಲಿಕ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ ಶಾಲೆ ಅರೆಕಾಲಿಕ ಉಪನ್ಯಾಸಕರಿಗೆ ಕನಿಷ್ಠ ವೇತನವನ್ನು ಸರ್ಕಾರ ನಿಗದಿಪಡಿಸಿದೆ.
ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಿಗೆ ಕನಿಷ್ಠ ವೇತನವನ್ನು 7,500 ರೂ.ನಿಂದ 10,000 ರೂ.ವರೆಗೆ ನಿಗದಿ ಮಾಡಲಾಗಿದೆ. ಅನುದಾನಿತ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕರ ವೇತನ 10,000 ರೂ.ನಿಂದ 15,000 ರೂ.ವರೆಗೆ ಹೆಚ್ಚಳ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.