ಹೊಸ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಸಿದ್ಧತೆ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ಮುಖ್ಯ ವಿಷ್ಯವೊಂದನ್ನು ಹೇಳಿದ್ದಾರೆ.
ಎಲ್ಲಾ ಮತದಾರರು ಚುನಾವಣಾ ಅಭ್ಯರ್ಥಿಗಳ ಬಗ್ಗೆ ಎಲ್ಲವನ್ನೂ ತಿಳಿದುಕೊಳ್ಳಬೇಕೆಂದಿದ್ದಾರೆ. ರಾಜಕೀಯ ಪಕ್ಷಗಳು. ಅಭ್ಯರ್ಥಿಗಳ ಮಾಹಿತಿಯನ್ನು ಪತ್ರಿಕೆಗಳು, ದೂರದರ್ಶನ ಮತ್ತು ವೆಬ್‌ಸೈಟ್‌ಗಳ ಮೂಲಕ ಮತದಾರರಿಗೆ ತಲುಪಿಸಬೇಕಾಗುತ್ತದೆ ಎಂದಿದ್ದಾರೆ.
ಚುನಾವಣಾ ಆಯೋಗವು ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತ್ತು ಆಯುಕ್ತರಾದ ರಾಜೀವ್ ಕುಮಾರ್ ಮತ್ತು ಅನೂಪ್ ಚಂದ್ರ ಎರಡು ದಿನಗಳ ಭೇಟಿಗಾಗಿ ಗೋವಾ ತಲುಪಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಮತದಾರರು ಅಭ್ಯರ್ಥಿಯ ಎಲ್ಲಾ ಮಾಹಿತಿಯನ್ನು ಪಡೆಯಬೇಕು. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗೆ ಕ್ರಿಮಿನಲ್ ದಾಖಲೆ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ರಿಕೆ, ಟಿವಿ ಮತ್ತು ವೆಬ್‌ಸೈಟ್‌ನಲ್ಲಿ ತಿಳಿಸಬೇಕು. ಒಂದು ವೇಳೆ ಕ್ರಿಮಿನಲ್ ದಾಖಲೆ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದರೆ ಅದಕ್ಕೆ ಕಾರಣವೇನು ಎಂಬುದನ್ನು ರಾಜಕೀಯ ಪಕ್ಷಗಳು ಮತದಾರರಿಗೆ ತಿಳಿಸಬೇಕು ಎಂದಿದ್ದಾರೆ.