ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಸಿ ಚುನಾವಣೆಗೆ ಬಗ್ಗೆ ಮಾಹಿತಿ ನೀಡಲಾಗಿದೆ.
ಗುಜರಾತ್ ನಲ್ಲಿ ಇದುವರೆಗೆ 4.83 ಕೋಟಿ ಮತದಾರರ ನೋಂದಣಿಯಾಗಿದೆ. 182 ವಿಧಾನಸಭಾ ಕ್ಷೇತ್ರಗಳಲ್ಲಿ 51,782 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರಚೋದನಾರಹಿತ, ಸುಗಮವಾಗಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಪಕ್ಷಗಳು ಅಂತಹ ಅಭ್ಯರ್ಥಿ ಆಯ್ಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಅಭ್ಯರ್ಥಿಗಳು ಅಪರಾಧಕ್ಕೆ ಸಂಬಂಧಿಸಿದ ದಾಖಲೆ ನೀಡಬೇಕು. ಅಪರಾಧ ಕುರಿತ ಅಂಶಗಳನ್ನು ಮೂರು ಬಾರಿ ಜಾಹೀರಾತು ನೀಡಬೇಕು. ಇದರಿಂದ ಅಭ್ಯರ್ಥಿ ಬಗ್ಗೆ ಮತದಾರರು ಜಾಗೃತಗೊಳ್ಳುತ್ತಾರೆ ಎಂದು ಹೇಳಿದ್ದಾರೆ.