alex Certify ತಡರಾತ್ರಿ ರೇವ್ ಪಾರ್ಟಿ: ದಾಳಿ ವೇಳೆ ಡ್ರಗ್ಸ್ ನಶೆಯಲ್ಲಿದ್ದವರು ಪರಾರಿ, ಕೆಲವರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ರೇವ್ ಪಾರ್ಟಿ: ದಾಳಿ ವೇಳೆ ಡ್ರಗ್ಸ್ ನಶೆಯಲ್ಲಿದ್ದವರು ಪರಾರಿ, ಕೆಲವರು ವಶಕ್ಕೆ

ಬೆಂಗಳೂರು: ಆನೇಕಲ್ ಸಮೀಪ ಮಧ್ಯರಾತ್ರಿ ರೇವ್ ಪಾರ್ಟಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಡ್ರಗ್ಸ್ ನಶೆಯಲ್ಲಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರೆಸಾರ್ಟ್ ಗೆ ಹೊಂದಿಕೊಂಡಿರುವ ನಿರ್ಜನ ಪ್ರದೇಶದಲ್ಲಿ ರೇವ್ ಪಾರ್ಟಿ ನಡೆಸಲಾಗಿದೆ. ಉದ್ಯಮಿಗಳ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಡಿಜೆ. ಕಲರ್ ಫುಲ್ ಲೈಟಿಂಗ್, ಡ್ರಗ್ಸ್ ನೊಂದಿಗೆ ಭರ್ಜರಿ ಪಾರ್ಟಿ ನಡೆಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ದಾಳಿ ಮಾಡಿದ್ದಾರೆ.

ಪೊಲೀಸ್ ದಾಳಿಯ ವೇಳೆ ಅಲ್ಲಿದ್ದವರು ಪರಾರಿಯಾಗಿದ್ದು, ಬೆನ್ನಟ್ಟಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆನೇಕಲ್ ಸಮೀಪದ ರೆಸಾರ್ಟ್ ನಲ್ಲಿ 30 -40 ಜನರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಡ್ರಗ್ಸ್ ನಶೆಯಲ್ಲಿ ಯುವಕ-ಯುವತಿಯರು ತೇಲಾಡಿದ್ದು, ಪಾರ್ಟಿಯ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...